ವಿವಿಧ ಮತದಾರರ ಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು: ಸಮರ್ಥಿಸಿಕೊಂಡ ಉತ್ತರಾಖಂಡ ಎಸ್‌ಇಸಿಗೆ ಸುಪ್ರೀಂ ₹2 ಲಕ್ಷ ದಂಡ

ಒಂದಕ್ಕಿಂತ ಹೆಚ್ಚು ಪ್ರದೇಶಗಳ ಮತದಾರರ ಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು ಇದ್ದರೂ, ಅವರ ನಾಮಪತ್ರವನ್ನು ಅಂಗೀಕರಿಸಲು ಅವಕಾಶ ನೀಡುವ ಎಸ್ಇಸಿಯ ಸ್ಪಷ್ಟೀಕರಣಕ್ಕೆ ಹೈಕೋರ್ಟ್ ಈ ಹಿಂದೆ ತಡೆ ನೀಡಿತ್ತು.
Supreme Court
Supreme Court
Published on

ಒಂದಕ್ಕಿಂತ ಹೆಚ್ಚು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು ಇದೆ ಎಂಬ ಕಾರಣಕ್ಕೆ ಅವರ ನಾಮಪತ್ರ ತಿರಸ್ಕರಿಸುವಂತಿಲ್ಲ ಎಂದು ಸಮಜಾಯಿಷಿ ನೀಡಿದ್ದ ಉತ್ತರಾಖಂಡ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ₹2 ಲಕ್ಷ ದಂಡ ವಿಧಿಸಿದೆ.

ಅಂತೆಯೇ ಜುಲೈನಲ್ಲಿ ಉತ್ತರಾಖಂಡ್ ಹೈಕೋರ್ಟ್ ನೀಡಿದ್ದ ಸ್ಪಷ್ಟೀಕರಣಕ್ಕೆ ತಡೆ ನೀಡುವುದರ ವಿರುದ್ಧ ಎಸ್‌ಇಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಚುನಾವಣಾ ಆಯೋಗ ಶಾಸನಬದ್ಧ ನಿಬಂಧನೆಗಳಿಗೆ ವಿರುದ್ಧವಾಗಿ ಹೇಗೆ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಕೇಳಿತು.

Also Read
ಶಾಸಕ ರಿಜ್ವಾನ್‌ ಅರ್ಷದ್‌ ವಿರುದ್ಧ ಮತದಾರರ ನಕಲಿ ಚೀಟಿ ತಯಾರು ಆರೋಪ: ಸೆ.19ಕ್ಕೆ ವಿಚಾರಣೆ ಮುಂದೂಡಿಕೆ

ಸಿಇಸಿ ನೀಡಿದ ಸ್ಪಷ್ಟೀಕರಣ ಉತ್ತರಾಖಂಡ ಪಂಚಾಯತ್ ರಾಜ್ ಕಾಯಿದೆ- 2016ರ ಸೆಕ್ಷನ್ 9(6) ಮತ್ತು 9(7)ಕ್ಕೆ ವಿರುದ್ಧವಾಗಿದೆ ಎಂದು ಕಳೆದ ಜುಲೈನಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಜಿ ನರೇಂದರ್ ಮತ್ತು ನ್ಯಾಯಮೂರ್ತಿ ಅಲೋಕ್ ಮೆಹ್ರಾ ಅವರಿದ್ದ ವಿಭಾಗೀಯ ಪೀಠ ಹೇಳಿತ್ತು. ಈ ಸೆಕ್ಷನ್‌ಗಳು ಒಂದಕ್ಕಿಂತ ಹೆಚ್ಚು ಪ್ರಾದೇಶಿಕ ಕ್ಷೇತ್ರಗಳಲ್ಲಿ ಅಥವಾ ಒಂದಕ್ಕಿಂತ ಹೆಚ್ಚು ಮತದಾರರ ಪಟ್ಟಿಯಲ್ಲಿ ಒಬ್ಬ ವ್ಯಕ್ತಿಯು ಹೆಸರನ್ನು ನೋಂದಾಯಿಸುವುದನ್ನು ನಿಷೇಧಿಸುತ್ತದೆ.

ವ್ಯಕ್ತಿಗಳ ಹೆಸರು ಒಂದಕ್ಕಿಂತ ಹೆಚ್ಚು ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದು ನಾಮಪತ್ರಗಳನ್ನು ಚುನಾವಣಾ ಆಯೋಗ ಸರಿಯಾಗಿ ಪರಿಶೀಲಿಸುತ್ತಿಲ್ಲ ಎಂದು ಶಕ್ತಿ ಸಿಂಗ್ ಎಂಬುವವರು ಆರೋಪಿಸಿದ್ದರು.

Also Read
ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು: ಸೋನಿಯಾ ವಿರುದ್ಧದ ದೂರು ತಿರಸ್ಕರಿಸಿದ್ದೇಕೆ ದೆಹಲಿ ನ್ಯಾಯಾಲಯ?

ಈ ರೀತಿಯ ಅಕ್ರಮ ನಡೆದಿದ್ದರೂ, ಹಲವಾರು ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ, ಇದರಿಂದಾಗಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆಯಾಗಿದೆ ಎಂದು ಅವರು ವಾದಿಸಿದ್ದರು. ಈ ಸಂಬಂಧ ಹಲವಾರು ದೂರುಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ, ಎಸ್‌ಇಸಿ ಸ್ಪಷ್ಟೀಕರಣ ನೀಡಿತ್ತು ಎಂದು ಅರ್ಜಿದಾರರು ಹೇಳಿದ್ದರು.

ಎಸ್‌ಇಸಿ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದ ನಂತರ, ಅದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಇಂದು ವಜಾಗೊಳಿಸಲಾಗಿದೆ.

Kannada Bar & Bench
kannada.barandbench.com