ಸೇನಾ ಅಕಾಡೆಮಿಗಳಲ್ಲಿ ಮಹಿಳೆಯರಿಗಿಲ್ಲ ಪ್ರಾಶಸ್ತ್ಯ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ಎನ್‌ಡಿಎಗೆ ಸೇರ್ಪಡೆಗೊಳ್ಳಲು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನಿರಾಕರಿಸುವುದು ಸಂವಿಧಾನದ 14, 15, 16 ಮತ್ತು 19 ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಕುಶ್ ಕಲ್ರಾ ಅವರು ಈ ಹಿಂದೆ ಅರ್ಜಿ ಸಲ್ಲಿಸಿದ್ದರು.
Indian Army
Indian Army

ಭಾರತೀಯ ಸೈನ್ಯದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಮತ್ತು ಭಾರತೀಯ ನೌಕಾ ಅಕಾಡೆಮಿಗಳಿಗೆ (ಐಎನ್‌ಎ) ಸೇರಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಬುಧವಾರ ನೊಟಿಸ್‌ ನೀಡಿದೆ.

ಎನ್‌ಡಿಎ ಸೇರಲು ಅನುಮತಿ ನಿರಾಕರಿಸಲಾಗಿರುವ ಹಿನ್ನೆಲೆಯಲ್ಲಿ ತಮ್ಮನ್ನು ಕೂಡ ಪ್ರಕರಣದ ಪಕ್ಷಕಾರರನ್ನಾಗಿ ಮಾಡಿಕೊಳ್ಳುವಂತೆ ಮಹಿಳಾ ಅಭ್ಯರ್ಥಿ ಅನಿತಾ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರಿದ್ದ ಪೀಠ ಈ ಸಂಬಂಧ ಕೇಂದ್ರಕ್ಕೆ ನೋಟಿಸ್‌ ನೀಡಿತು.

ಎನ್‌ಡಿಎಗೆ ಸೇರ್ಪಡೆಗೊಳ್ಳಲು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನಿರಾಕರಿಸುವುದು ಸಂವಿಧಾನದ 14, 15, 16 ಮತ್ತು 19 ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಕುಶ್‌ ಕಲ್ರಾ ಅವರು ಅಡ್ವೊಕೇಟ್‌ ಆನ್‌ ರೆಕಾರ್ಡ್‌ ಮೋಹಿತ್ ಪಾಲ್ ಅವರ ಮೂಲಕ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Also Read
ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಲ್ಲಿನ 1,113 ನ್ಯಾಯಮೂರ್ತಿಗಳ ಪೈಕಿ 80 ಮಹಿಳಾ ನ್ಯಾಯಮೂರ್ತಿಗಳು: ಕಾನೂನು ಸಚಿವ

ಭಾರತೀಯ ಸೈನ್ಯದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವನ್ನು ವಿಸ್ತರಿಸಬೇಕೆಂದು ಸುಪ್ರೀಂಕೋರ್ಟ್‌ ನೀಡಿದ್ದ ನಿರ್ದೇಶನದ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸಲಾಗಿತ್ತು. ವಿ. ಬಬಿತಾ ಪುನಿಯಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ತೀರ್ಪು ನೀಡಿದ ಬಳಿಕ ಸೇನೆಯ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗವೊಂದನ್ನು ರಚಿಸಲಾಗಿದೆ.

ಆದಾಗ್ಯೂ, ಸಶಸ್ತ್ರ ಪಡೆಗಳಿಗೆ ಶಾಶ್ವತ ಆಯೋಗದ ಅಧಿಕಾರಿಗಳಾಗಿ ಸೇರಲು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅವಕಾಶಗಳಿಲ್ಲ. ಈಗಿನ ಸ್ಥಿತಿಯಲ್ಲಿ ಮಹಿಳಾ ಅಭ್ಯರ್ಥಿಗಳು ಸಶಸ್ತ್ರ ಪಡೆಗಳಿಗೆ ಅರ್ಹತೆ ಪಡೆದು ನಂತರ ಅಲ್ಪಾವಧಿ ಸೇವಾ ಆಯೋಗದ (ಎಸ್‌ಎಸ್‌ಸಿ) ಅಧಿಕಾರಿಯಾಗಿ ಒಂದು ನಿರ್ದಿಷ್ಟ ಅವಧಿಗೆ ಸೇವೆ ಸಲ್ಲಿಸಿದ ನಂತರ ಶಾಶ್ವತ ಆಯೋಗವನ್ನು ಆರಿಸಿಕೊಳ್ಳ ಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com