ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹಣಕಾಸು ಮಸೂದೆಯಾಗಿ ತಿದ್ದುಪಡಿಗೆ ಅವಕಾಶ ಕುರಿತು ವಿಸ್ತೃತ ಪೀಠ ನಿರ್ಧರಿಸಲಿದೆ ಎಂದು ತಿಳಿಸಿದ ನ್ಯಾಯಾಲಯ.
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ (ಪಿಎಂಎಲ್‌ಎ) ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ [ವಿಜಯ್ ಮದನ್‌ಲಾಲ್ ಚೌಧರಿ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣ].

ಕಾನೂನಿನ ಸಿಂಧುತ್ವ ಪ್ರಶ್ನಿಸಿದ್ದ 241 ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿ ಟಿ ರವಿಕುಮಾರ್ ಅವರ ಪೀಠ ಈ ತೀರ್ಪು ಪ್ರಕಟಿಸಿದೆ.

Also Read
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಅಕ್ರಮ ಹಣ ವರ್ಗಾವಣೆ ಆರೋಪದಡಿ ಸೋನಿಯಾ, ರಾಹುಲ್ ಗಾಂಧಿಗೆ ಇ ಡಿ ಸಮನ್ಸ್

ಕಾಯಿದೆಯ ಸೆಕ್ಷನ್ 3 (ಅಕ್ರಮ ಹಣ ವರ್ಗಾವಣೆ ವ್ಯಾಖ್ಯಾನ), 5 (ಆಸ್ತಿ ಮುಟ್ಟುಗೋಲು), 8(4) [ಮುಟ್ಟುಗೋಲಾದ ಆಸ್ತಿಯ ಸ್ವಾಧೀನ), 17 (ಶೋಧಕಾರ್ಯ ಮತ್ತು ವಶ), 18 (ವ್ಯಕ್ತಿಗಳ ಶೋಧಕಾರ್ಯ), 19 ( ಬಂಧನದ ಅಧಿಕಾರ), 24 (ಸಾಕ್ಷ್ಯಾಧಾರದ ಹಿಮ್ಮುಖ ಹೊರೆ), 44 (ವಿಶೇಷ ನ್ಯಾಯಾಲಯದಿಂದ ವಿಚಾರಣೆಗೆ ಒಳಪಡುವ ಅಪರಾಧಗಳು), 45 ಅನ್ನು (ಸಂಜ್ಞೇಯವಾಗಿರುವಂತಹ ಅಪರಾಧಗಳು, ಅಸಂಜ್ಞೇಯ ಅಪರಾಧಗಳು ಮತ್ತು ನ್ಯಾಯಾಲಯದಿಂದ ಜಾಮೀನು ಪಡೆಯಲು ವಿಧಿಸುವ ಅವಳಿ ಷರತ್ತುಗಳು) ನ್ಯಾಯಾಲಯ ಎತ್ತಿ ಹಿಡಿದಿದೆ.

Also Read
ಪಿಎಂಎಲ್‌ಎ ಪ್ರಕರಣ: ಇಂಡಿಯನ್ಸ್‌ ಫಾರ್‌ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ನ ಟ್ರಸ್ಟಿಗೆ ವಿಶೇಷ ನ್ಯಾಯಾಲಯದ ಜಾಮೀನು

ಜಾರಿ ಪ್ರಕರಣ ಮಾಹಿತಿ ವರದಿ (ಇಸಿಐಆರ್‌) ಆಂತರಿಕ ದಾಖಲೆಯಾಗಿರುವುದರಿಂದ ಅದನ್ನು ಎಫ್‌ಐಆರ್‌ಗೆ ಹೋಲಿಸಲಾಗದು. ಹೀಗಾಗಿ ಪಿಎಂಎಲ್‌ಎ ಅಡಿಯಲ್ಲಿ ಆರೋಪಿಗೆ ಇಸಿಐಆರ್‌ ನೀಡುವುದು ಕಡ್ಡಾಯವಲ್ಲ. ಬಂಧನದ ಸಮಯದಲ್ಲಿ ಆತನನ್ನು ಏಕೆ ಸೆರೆ ಹಿಡಿಯಲಾಗುತ್ತಿದೆ ಎಂಬ ಮಾಹಿತಿ ನೀಡಿದರೆ ಸಾಕು ಎಂದು ಕೂಡ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Also Read
ಶಿಕ್ಷಕರ ಉದ್ಯೋಗ ಹಗರಣ: ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ 10 ದಿನಗಳ ಕಾಲ ಇ ಡಿ ವಶಕ್ಕೆ

ನಿಗದಿತ ಅಪರಾಧಗಳಿಗೆ ಅನುಗುಣವಾಗಿ ಪಿಎಂಎಲ್‌ ಕಾಯಿದೆಯಡಿ ಶಿಕ್ಷೆಯ ಪ್ರಮಾಣ ನಿಗದಿಪಡಿಸಬೇಕು ಎಂಬು ವಾದವನ್ನು ನ್ಯಾಯಾಲಯ ಸಂಪೂರ್ಣ ಆಧಾರರಹಿತ ಎಂದು ತಿರಸ್ಕರಿಸಿತು.

Also Read
ಅಕ್ರಮ ಹಣ ವರ್ಗಾವಣೆ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ದೆಹಲಿ ಸಚಿವ ಸತ್ಯೇಂದರ್‌ ಜೈನ್

ಆದರೆ 2019 ರಲ್ಲಿ ಹಣಕಾಸು ಮಸೂದೆಯಾಗಿ ಕಾಯಿದೆಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಲಾಗಿದ್ದು ಆ ಕುರಿತು ಈಗಾಗಲೇ ತನ್ನ ಮುಂದಿರುವ ಪ್ರಕರಣದಲ್ಲಿ ವಿಸ್ತೃತ ಪೀಠ ನಿರ್ಧರಿಸಬೇಕಿದೆ .

Also Read
[ಅಕ್ರಮ ಹಣ ವರ್ಗಾವಣೆ ಪ್ರಕರಣ] ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ ಜಾಮೀನು ಮನವಿ ವಜಾ ಮಾಡಿದ ಸುಪ್ರೀಂ ಕೋರ್ಟ್‌

ಶೋಧಕಾರ್ಯ, ಆಸ್ತಿ ಮುಟ್ಟುಗೋಲು ಹಾಗೂ ಆಸ್ತಿ ಸ್ವಾಧೀನಕ್ಕಾಗಿ ಜಾರಿ ನಿರ್ದೇಶನಾಲಯಕ್ಕೆ ನೀಡಿರುವ ವ್ಯಾಪಕ ಅಧಿಕಾರ, ನಿರಪರಾಧಿ ಎಂದು ಸಾಬೀತುಪಡಿಸಲು ಆರೋಪಿಗಳ ಮೇಲೆ ಹಿಮ್ಮುಖ ಹೊರೆ, ಸಾಕ್ಷಿಯಾಗಿ ಇ ಡಿಗೆ ನೀಡಿದ ಹೇಳಿಕೆಗಳನ್ನು ಒಪ್ಪಿಕೊಳ್ಳುವುದು, ಜಾಮೀನು ನೀಡಲು ಕಠಿಣ ಷರತ್ತುಗಳು ಸೇರಿದಂತೆ ಕಾನೂನಿನ ವಿವಿಧ ಅಂಶಗಳನ್ನು ಅರ್ಜಿದಾರರು ಪ್ರಶ್ನಿಸಿದ್ದರು.

Related Stories

No stories found.
Kannada Bar & Bench
kannada.barandbench.com