ಖಾಸಗಿ ಆಸ್ಪತ್ರೆಗಳಿಂದ ರೋಗಿಗಳ ಸುಲಿಗೆಗೆ ತಡೆ: ನೀತಿ ರೂಪಿಸುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸಲಹೆ

ಪ್ರಕರಣದಲ್ಲಿ ನೇರ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಾಲಯ ಖಾಸಗಿ ಆಸ್ಪತ್ರೆಗಳಲ್ಲಿ ಅಸಮಂಜಸ ಶುಲ್ಕ ಮತ್ತು ರೋಗಿಗಳ ಶೋಷಣೆ ತಡೆಯಲು ರಾಜ್ಯಗಳು ನೀತಿ ರೂಪಿಸುವುದು ಮುಖ್ಯ ಎಂದಿತು.
Hospital Bed
Hospital Bed
Published on

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಮೇಲೆ ವಿಧಿಸಲಾಗುವ ಅಸಮಂಜಸ ಶುಲ್ಕ ಮತ್ತು ಶೋಷಣೆ ತಡೆಯುವ ಕುರಿತು ನೀತಿ ರೂಪಿಸುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ಈಚೆಗೆ ತಿಳಿಸಿದೆ [ಸಿದ್ಧಾರ್ಥ್ ದಾಲ್ಮಿಯಾ ಮತ್ತಿತರರು ಹಾಗೂ ಭಾರತ ಒಕ್ಕೂಟ ಇನ್ನಿತರರ ನಡುವಣ ಪ್ರಕರಣ].

ಕಡ್ಡಾಯ ನಿರ್ದೇಶನ ನೀಡುವ ಮೂಲಕ ಸುಪ್ರೀಂ ಕೋರ್ಟ್‌ ತಾನಾಗಿಯೇ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವುದು ಸೂಕ್ತವಲ್ಲ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

Also Read
ಸೇನಾ ನೆಲೆ ಬಳಿ ಆಸ್ಪತ್ರೆ ನಿರ್ಮಾಣಕ್ಕೆ ವಿರೋಧ: ಅರ್ಜಿದಾರನಿಗೆ ದಂಡ ವಿಧಿಸಿದ ಕಾಶ್ಮೀರ ಹೈಕೋರ್ಟ್

ಹಾಗೆ ನಿರ್ದೇಶನ ನೀಡಿದರೆ, ಖಾಸಗಿ ವಲಯದಲ್ಲಿ ಆಸ್ಪತ್ರೆಗಳ ಬೆಳವಣಿಗೆಗೆ ಅಡ್ಡಿಯಾಗಬಹುದು ಎಂದ ನ್ಯಾಯಾಲಯ ಸಮಸ್ಯೆಯನ್ನು ರಾಜ್ಯ ನೀತಿಗಳ ಮೂಲಕ ನಿಭಾಯಿಸುವುದು ಸೂಕ್ತ ಎಂದಿತು.

ರೋಗಿಗಳು ಅಥವಾ ಅವರನ್ನು ಆರೈಕೆ ಮಾಡುತ್ತಿರುವವನ್ನು ಶೋಷಣೆಯಿಂದ ರಕ್ಷಿಸಲು ಅಂತೆಯೇ ಖಾಸಗಿ ಸಂಸ್ಥೆಗಳು ಆರೋಗ್ಯ ವಲಯಕ್ಕೆ ಪ್ರವೇಶಿಸುವುದನ್ನು ನಿರುತ್ಸಾಹಗೊಳಿಸುವಂತೆ ಮತ್ತು ಅಸಮಂಜಸ ನಿರ್ಬಂಧ ಹೇರದಂತೆ ನೋಡಿಕೊಳ್ಳುವುದಕ್ಕಾಗಿ ಸಮಗ್ರ ದೃಷ್ಟಿಕೂನ ಮತ್ತು ಅಗತ್ಯ ಮಾರ್ಗಸೂಚಿ ರೂಪಿಸಲು ನೀತಿ ನಿರೂಪಕರೇ ಸೂಕ್ತ ಎಂಬುದಾಗಿ ನ್ಯಾಯಾಲಯ ಮಾರ್ಚ್ 4ರಂದು ಅಭಿಪ್ರಾಯಪಟ್ಟಿದೆ.  

ರೋಗಿಗಳು ತಮ್ಮಲ್ಲಿರುವ ಔಷಧಾಲಯಗಳಿಂದಲೇ ಹೆಚ್ಚಿನ ಬೆಲೆಗೆ ಔಷಧ ಮತ್ತು ವೈದ್ಯಕೀಯ ಸಾಮಗ್ರಿ ಖರೀದಿಸುವಂತೆ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಒತ್ತಾಯಿಸುವುದನ್ನು ತಡೆಯುವುದಕ್ಕಾಗಿ ನಿರ್ದೇಶನ ನೀಡಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಲಾಗಿತ್ತು.

ಅರ್ಜಿದಾರರ ಕುಟುಂಬ ಸದಸ್ಯರು ಕ್ಯಾನ್ಸರ್‌ ಚಿಕಿತ್ಸೆಗೆ ಒಳಗಾಗಿದ್ದರು. ಈ ಸಂದರ್ಭದಲ್ಲಿ ಅತಿಯಾದ ಶುಲ್ಕ ಪಾವತಿಸಬೇಕಾದ್ದರಿಂದ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದು ಆರ್ಥಿಕ ಶೋಷಣೆಗೆ ಸಮ ಮತ್ತು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಆರೋಗ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅವರು ವಾದಿಸಿದ್ದರು.

Also Read
ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ವಸತಿ ಶಾಲೆಗೆ ಹಸ್ತಾಂತರ: ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ನಿರ್ದೇಶನ

ಯಾವುದೇ ನಿಯಂತ್ರಣ ಇಲ್ಲದಿರುವುದರಿಂದ ಖಾಸಗಿ ಆಸ್ಪತ್ರೆಗಳು ಮನಸೋಇಚ್ಛೆಯಾಗಿ ಶುಲ್ಕ ವಿಧಿಸುತ್ತಿದ್ದು ಅವುಗಳ ಬಲವಂತದ ಕ್ರಮ ತಡೆಯಲು ನ್ಯಾಯಾಂಗ ಮಧ್ಯಪ್ರವೇಶಿಸಬೇಕೆಂದು ಅವರು ಕೋರಿದ್ದರು. 

ಎಲ್ಲರಿಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಜೀವಿಸುವ ಹಕ್ಕಿನ ಮೂಲಭೂತ ಅಂಶ. ಆದರೆ ದೇಶದ ಅಗಾಧ ಜನಸಂಖ್ಯೆ ಹಿನ್ನೆಲೆಯಲ್ಲಿ ಸರ್ಕಾರ ವೈದ್ಯಕೀಯ ಮೂಲಸೌಕರ್ಯ ಕಲ್ಪಿಸಲು ಹೆಣಗಿದ ಪರಿಣಾಮ ಖಾಸಗಿ ಆಸ್ಪತ್ರೆಗಳ ಸೇವೆ ಆರಂಭವಾಯಿತು ಎಂದ ನ್ಯಾಯಾಲಯ ಖಾಸಗಿ ಆರೋಗ್ಯ ಸಂಸ್ಥೆಗಳ ಬೆಳವಣಿಗೆಗೆ ಅಡ್ಡಿಯಾಗಬಹುದಾದ ನಿರ್ದೇಶನ ನೀಡದಂತೆ ನೀತಿ ರೂಪಿಸಬೇಕೆಂದು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿತು.

[ಆದೇಶದ ಪ್ರತಿಗಾಗಿ ಇಲ್ಲಿ ಕ್ಲಿಕ್ಕಿಸಿ]

Attachment
PDF
Siddharth_Dalmia___Anr__vs__Union_of_India___Ors
Preview
Kannada Bar & Bench
kannada.barandbench.com