ಚುನಾವಣಾ ಬಾಂಡ್: ಇನ್ನು ಕೆಲ ಹೊತ್ತಿನಲ್ಲಿ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್.ಗವಾಯಿ, ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಲಿದೆ.
ಚುನಾವಣಾ ಬಾಂಡ್: ಇನ್ನು ಕೆಲ ಹೊತ್ತಿನಲ್ಲಿ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್
Published on

ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ನೀಡಲು ಅನುಮತಿಸುವ ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಲಿದೆ (ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತಿತರರು ಹಾಗೂ ಭಾರತ ಒಕ್ಕೂಟ ನಡುವಣ ಪ್ರಕರಣ).

ಸಿಜೆಐ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಐವರು ಸದಸ್ಯರ ಸಾಂವಿಧಾನಿಕ ಪೀಠ ಮೂರು ದಿನಗಳ ವಿಚಾರಣೆಯ ನಂತರ 2023 ನವೆಂಬರ್ 2ರಂದು ತೀರ್ಪು ಕಾಯ್ದಿರಿಸಿತ್ತು.

ಸಿಜೆಐ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ
ಸಿಜೆಐ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ

ಈ ಯೋಜನೆಯಡಿ ಸೆಪ್ಟೆಂಬರ್ 30, 2023ರವರೆಗೆ ಮಾರಾಟವಾದ ಚುನಾವಣಾ ಬಾಂಡ್‌ಗಳ ಮಾಹಿತಿ ನೀಡುವಂತೆ ತೀರ್ಪು ಕಾಯ್ದಿರಿಸುವ ವೇಳೆ ಸುಪ್ರೀಂ ಕೋರ್ಟ್ ಭಾರತದ ಚುನಾವಣಾ ಆಯೋಗಕ್ಕೆ (ಇಸಿಐ) ಸೂಚಿಸಿತ್ತು.

ಚುನಾವಣಾ ಬಾಂಡ್ ಯೋಜನೆಯು ದಾನಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (ಎಸ್‌ಬಿಐ) ಬಾಂಡ್‌ಗಳನ್ನು ಖರೀದಿಸಿ ಅನಾಮಧೇಯವಾಗಿ ರಾಜಕೀಯ ಪಕ್ಷಕ್ಕೆ ಹಣ ಕಳುಹಿಸಲು ಅನುವು ಮಾಡಿಕೊಡುತ್ತದೆ.

ಚುನಾವಣಾ ಬಾಂಡ್‌ ಎಂಬುದು ಭರವಸೆಯ ಪತ್ರದ ರೂಪದಲ್ಲಿದ್ದು, ಅದನ್ನು ಯಾವುದೇ ವ್ಯಕ್ತಿ, ಕಂಪೆನಿ, ಸಂಸ್ಥೆ ಅಥವಾ ಸಂಘಟನೆಯ ವ್ಯಕ್ತಿಗಳು ಖರೀದಿಸಬಹುದಾಗಿದೆ. ಆ ವ್ಯಕ್ತಿ ಅಥವಾ ಸಂಸ್ಥೆಯು ಭಾರತೀಯತೆಯನ್ನು ಹೊಂದಿರಬೇಕಷ್ಟೆ. ಚುನಾವಣಾ ಬಾಂಡ್‌ ವಿಭಿನ್ನ ಬಗೆಯಲ್ಲಿದ್ದು, ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ನಿರ್ದಿಷ್ಟ ಉದ್ದೇಶಕ್ಕಾಗಿ ಅವುಗಳನ್ನು ನೀಡಲಾಗುತ್ತದೆ.

Kannada Bar & Bench
kannada.barandbench.com