ಮೋದಿ ಉಪನಾಮ ಹೇಳಿಕೆ: ಶಿಕ್ಷೆಗೆ ತಡೆ ನೀಡಲು ರಾಹುಲ್ ಮಾಡಿದ್ದ ಮನವಿ ತಿರಸ್ಕರಿಸಿದ ಸೂರತ್ ಸೆಷನ್ಸ್ ನ್ಯಾಯಾಲಯ

ಕೋಲಾರದಲ್ಲಿ 2019 ರಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ರಾಹುಲ್ “ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ” ಎಂದು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಮಾರ್ಚ್ 23 ರಂದು ಸೂರತ್‌ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿತ್ತು.
Rahul Gandhi, Surat Court
Rahul Gandhi, Surat Court

ಮೋದಿ ಉಪನಾಮ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಸೂರತ್‌ ಮ್ಯಾಜಿಸ್ಟ್ರೇಟ್‌ ನ್ಯಾಯಲಯ ನೀಡಿದ್ದ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಾಡಿದ್ದ ಮನವಿಯನ್ನು ಸೂರತ್‌ ಸೆಷನ್ಸ್‌ ನ್ಯಾಯಾಲಯ ತಿರಸ್ಕರಿಸಿದೆ. ಆ ಮೂಲಕ ರಾಹುಲ್ ಗಾಂಧಿ ಅವರಿಗೆ ಹಿನ್ನಡೆಯಾಗಿದೆ [ರಾಹುಲ್‌ ಗಾಂಧಿ ಮತ್ತು ಪೂರ್ಣೇಶ್‌ ಮೋದಿ ನಡುವಣ ಪ್ರಕರಣ].

ಕೋಲಾರದಲ್ಲಿ 2019ರಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ರಾಹುಲ್‌ "ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿಯೇ ಇರಲಿ, ಎಲ್ಲಾ ಕಳ್ಳರ ಹೆಸರಿನಲ್ಲಿ ಮೋದಿ ಏಕೆ ಇದೆ?" ಎಂದು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಮಾರ್ಚ್ 23 ರಂದು ಸೂರತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿತ್ತು.

Also Read
ನರೇಂದ್ರ ಮೋದಿ ಮಾತ್ರ ಮೊಕದ್ದಮೆ ಹೂಡಬಹುದಿತ್ತೆ ವಿನಾ ಮೋದಿ ಉಪನಾಮ ಇರುವವರೆಲ್ಲಾ ಅಲ್ಲ: ಮೇಲ್ಮನವಿಯಲ್ಲಿ ರಾಹುಲ್

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಬಿನ್ ಮೊಗೇರ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದರು. ಪರಿಣಾಮ ರಾಹುಲ್‌ ಅವರ ಲೋಕಸಭಾ ಸದಸ್ಯತ್ವ ಅನರ್ಹತೆ ಮುಂದುವರೆಯಲಿದೆ. ಶಿಕ್ಷೆ ವಿಧಿಸುವ ಮೊದಲು ರಾಹುಲ್‌ ಕೇರಳದ ವಯನಾಡ್ ಕ್ಷೇತ್ರದ ಸಂಸದರಾಗಿದ್ದರು.

ನ್ಯಾಯಾಧೀಶ ಮೊಗೇರ ಅವರು ʼ ಶಿಕ್ಷೆಗೆ ತಡೆ ನೀಡಬೇಕೇ ಅಥವಾ ಬೇಡವೇ ಎಂಬ ವಿಷಯದ ಕುರಿತು ಏಪ್ರಿಲ್ 13 ರಂದು ಎರಡೂ ಕಡೆಯ ಪಕ್ಷಕಾರರ ಅಹವಾಲುಗಳನ್ನು ಆಲಿಸಿದ್ದರು.

Related Stories

No stories found.
Kannada Bar & Bench
kannada.barandbench.com