ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ: ಇಬ್ಬರ ಸಾವು

ಸ್ಫೋಟದಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ತನಿಖೆ ನಡೆದಿದೆ.
Lawyers

Lawyers

Image for representative purpose

ಪಂಜಾಬ್‌ನ ಲುಧಿಯಾನ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭವಿಸಿರುವ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಧಾರಿತ ಸ್ಫೋಟಕಗಳನ್ನು ಬಳಸಿರುವ ಶಂಕೆ ವ್ಯಕ್ತವಾಗಿದ್ದು ನ್ಯಾಯಾಲಯ ಮತ್ತು ಪೊಲೀಸ್‌ ಕಚೇರಿಗಳು ಸನಿಹದಲ್ಲಿಯೇ ಇರುವ ಭದ್ರತೆಯ ಪ್ರದೇಶದಲ್ಲಿಯೇ ಘಟನೆ ಸಂಭವಿಸಿದೆ.

Also Read
ನ್ಯಾ.ಉತ್ತಮ್‌ ಶಂಕಾಸ್ಪದ ಸಾವು: ನ್ಯಾಯಾಧೀಶರ ಸುರಕ್ಷತೆ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ

ಸಂಕೀರ್ಣದ ಒಳಗಿನ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ಮತ್ತು ಅಧೀನ ನ್ಯಾಯಾಲಯಗಳ ನ್ಯಾಯಾಧೀಶರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ದಿನಗಳಲ್ಲಿಯೇ ಈ ಸ್ಫೋಟ ಸಂಭವಿಸಿದೆ.

Also Read
ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಶೂಟೌಟ್‌: ಗ್ಯಾಂಗ್‌ಸ್ಟರ್‌ ಜಿತೇಂದ್ರ ಗೋಗಿ, ಇನ್ನಿಬ್ಬರು ಗುಂಡಿಗೆ ಬಲಿ

ಕೆಲ ದಿನಗಳ ಹಿಂದೆ ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಸ್ಫೋಟ ಸಂಭವಿಸಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಈ ಸಂಬಂಧ ಡಿಆರ್‌ಡಿಒ ವಿಜ್ಞಾನಿಯೊಬ್ಬರನ್ನು ಪೊಲೀಸರು ಬಂಧಿಸಿದ್ದು, ಆರೋಪಿ ಮತ್ತು ವಕೀಲರ ನಡುವಿನ ವೈಯಕ್ತಿಕ ದ್ವೇಷ ಸ್ಫೋಟಕ್ಕೆ ಕಾರಣ ಎಂದು ತಿಳಿದುಬಂದಿತ್ತು.

Also Read
[ರೋಹಿಣಿ ನ್ಯಾಯಾಲಯ ಸ್ಫೋಟ] ಡಿಆರ್‌ಡಿಒ ವಿಜ್ಞಾನಿಯನ್ನು ಬಂಧಿಸಿದ ದೆಹಲಿ ಪೊಲೀಸರು

ಇದಕ್ಕೂ ಮೊದಲು ಅದೇ ನ್ಯಾಯಾಲಯದಲ್ಲಿ ದರೋಡೆಕೋರ ಜಿತೇಂದರ್ ಗೋಗಿ ಸೇರಿದಂತೆ ಮೂವರನ್ನು ಹತ್ಯೆ ಮಾಡಲಾಗಿತ್ತು. ಜಿಲ್ಲಾ ನ್ಯಾಯಾಲಯಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ದೆಹಲಿ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ.

Also Read
ರೋಹಿಣಿ ಕೋರ್ಟ್ ಶೂಟೌಟ್: ಕೆಳಹಂತದ ನ್ಯಾಯಾಲಯಗಳಲ್ಲಿ ಅಪರಾಧಿಗಳ ವರ್ಚುವಲ್‌ ಹಾಜರಿಗೆ ಸುಪ್ರೀಂನಲ್ಲಿ ಮನವಿ

ಜಾರ್ಖಂಡ್ ನ್ಯಾಯಾಧೀಶ ಉತ್ತಮ್ ಆನಂದ್ ಅವರು ವಾಯುವಿಹಾರದಲ್ಲಿ ತೊಡಗಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ್ದರು. ಈ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂಕೋರ್ಟ್‌ ವಿಚಾರಣೆ ನಡೆಸುತ್ತಿದೆ.

Related Stories

No stories found.
Kannada Bar & Bench
kannada.barandbench.com