ಗಿಗ್‌ ಕಾರ್ಮಿಕರ ಕಾಯಿದೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಉಬರ್‌

ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಸಲ್ಲಿಸಿದ ಅರ್ಜಿಯನ್ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
Uber
Uber
Published on

ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ 'ಪ್ಲಾಟ್‌ಫಾರ್ಮ್‌ ಆಧಾರಿತ ಗಿಗ್‌ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಕಾಯಿದೆ 2025' ಮತ್ತು ಅದರಡಿ ರೂಪಿಸಿರುವ ನಿಯಮಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.

ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಸಲ್ಲಿಸಿದ ಅರ್ಜಿಯನ್ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ಪೀಠವು ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕೇಂದ್ರ ಸರ್ಕಾರದ ಕಾರ್ಮಿಕ ಸಚಿವಾಲಯ, ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿಗೆ ನೋಟಿಸ್ ಜಾರಿಗೊಳಿಸಿತು.

Also Read
ಗಿಗ್‌ ಕಾರ್ಮಿಕರ ಕಲ್ಯಾಣ ಶುಲ್ಕವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲು ಹೈಕೋರ್ಟ್‌ ನಿರ್ದೇಶನ; ಕಾಯಿದೆ ತಡೆ ಸ್ಪಷ್ಟ ನಕಾರ

ಅಲ್ಲದೇ, ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಸಂಬಂಧಿಸಿದ ಎರಡನೇ ಕಂತಿನ ಕಲ್ಯಾಣ ಶುಲ್ಕವನ್ನು ಮೂರು ಜುಲೈ 23ರೊಳೆಗೆ ಹೈಕೋರ್ಟ್‌ನಲ್ಲಿ ಠೇವಣಿ ಇಡಬೇಕು ಎಂದು ಮತ್ತೊಂದು ಪೀಠ ಜುಲೈ 3ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಜುಲೈ 28ರಿಂದ ಮುಂದಿನ ಮೂರು ವಾರಗಳೆಂದು ಪರಿಗಣಿಸಬೇಕು ಎಂದು ನಿರ್ದೇಶನ ನೀಡಿತು. ಜತೆಗೆ. ಇದೇ ವಿಚಾರವಾಗಿ ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನೂ ಈ ಅರ್ಜಿಯೊಂದಿಗೆ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಿಗೆ ಸೂಚಿಸಿದ ಪೀಠವು ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿತು.

Kannada Bar & Bench
kannada.barandbench.com