ಉದಯಪುರ ಹತ್ಯೆ: ಎಲ್ಲಾ ಆರೋಪಿಗಳನ್ನು 10 ದಿನಗಳ ಕಾಲ ಎನ್ಐಎ ವಶಕ್ಕೆ ಒಪ್ಪಿಸಿದ ವಿಶೇಷ ನ್ಯಾಯಾಲಯ

ಕನ್ಹಯ್ಯಾ ಲಾಲ್ ತೇಲಿ ಅವರನ್ನು ಜೂನ್ 28, 2022 ರಂದು ಹಾಡುಹಗಲೇ ಹರಿತ ಆಯುಧ ಬಳಸಿ ಕೊಲೆ ಮಾಡಲಾಗಿತ್ತು.
NIA
NIA

ಉದಯಪುರದ ಟೈಲರ್‌ ಕನ್ಹಯ್ಯಾ ಲಾಲ್‌ ತೇಲಿ ಅವರನ್ನು ಹತ್ಯೆ ಮಾಡಿದ ಎಲ್ಲಾ ನಾಲ್ವರು ಆರೋಪಿಗಳನ್ನು ಎನ್‌ಐಎ ನ್ಯಾಯಾಲಯ 10 ದಿನಗಳ ಕಾಲ ಪೊಲೀಸ್‌ ವಶಕ್ಕೆ ಒಪ್ಪಿಸಿರುವುದು ವರದಿಯಾಗಿದೆ.

ಆರೋಪಿಗಳಲ್ಲಿ ಇಬ್ಬರನ್ನು ಮಂಗಳವಾರ ಬಂಧಿಸಲಾಗಿದ್ದು ಇನ್ನಿಬ್ಬರು ಗುರುವಾರ ರಾತ್ರಿ ಸೆರೆಸಿಕ್ಕಿದ್ದರು. ಬಿಗಿ ಭದ್ರತೆಯ ನಡುವೆ ನ್ಯಾಯಾಲಯಕ್ಕೆ ಹಾಜರಾದ ಅವರನ್ನು, ಜುಲೈ 12ರವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ. ಆರೋಪಿಗಳನ್ನು ಪೊಲೀಸ್ ವಾಹನದಲ್ಲಿ ನ್ಯಾಯಾಲಯದಿಂದ ವಾಪಸ್ ಕರೆದುಕೊಂಡು ಹೋಗುತ್ತಿದ್ದಾಗ ಆಕ್ರೋಶಗೊಂಡ ವಕೀಲರ ಗುಂಪು ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

Also Read
ಉದಯಪುರ ಹತ್ಯೆ: ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ವಿಚಾರಣಾಧೀನ ನ್ಯಾಯಾಲಯ

ಈ ಹಿಂದೆ ಗುರುವಾರ ಉದಯಪುರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

Also Read
ಉದಯಪುರ ಹತ್ಯೆ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ ಎನ್ಐಎ

ಜೂನ್ 29, 2022 ರಂದು ರಾಜಸ್ಥಾನದ ಉದಯಪುರದ ಧನ್ಮಂಡಿ ಜಿಲ್ಲೆಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ನಂತರ ಗೃಹ ಸಚಿವಾಲಯ ತನಿಖೆಯ ನೇತೃತ್ವ ವಹಿಸುವಂತೆ ಎನ್‌ಐಎಗೆ ಸೂಚಿಸಿದಾಗ ಅದು ಮತ್ತೆ ಪ್ರಕರಣ ದಾಖಲಿಸಿಕೊಂಡಿತ್ತು.

“ಯಾವುದೇ ಸಂಘಟನೆ ಶಾಮೀಲಾಗಿರುವ ಬಗ್ಗೆ ಮತ್ತು ಅಂತರರಾಷ್ಟ್ರೀಯ ನಂಟಿನ ಬಗ್ಗೆ ಸಂಪೂರ್ಣ ತನಿಖೆ ಮಾಡಲಾಗುತ್ತದೆ” ಎಂದು ಗೃಹ ಸಚಿವಾಲಯ ಟ್ವೀಟ್‌ ಮಾಡಿತ್ತು.

Related Stories

No stories found.
Kannada Bar & Bench
kannada.barandbench.com