ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಕಾಯಿದೆಯಂತ ವಿಶೇಷ ಕಾಯಿದೆಗಳ ಅಡಿ ದಾಖಲಾದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವುದನ್ನು ಪರಿಗಣಿಸುವಾಗ, ಸಮಾಜದ ದುರ್ಬಲ ವರ್ಗಗಳು ಒತ್ತಾಯಕ್ಕೆ ಒಳಗಾಗಿ ಪ್ರಕರಣ ಹಿಂತೆಗೆದುಕೊಳ್ಳುವ ಸಾಧ್ಯತೆಯನ್ನು ಪರಿಗಣಿಸಬೇಕು ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕಕ್ಷಿದಾರರ ನಡುವೆ ರಾಜಿ ಏರ್ಪಟ್ಟ ಹಿನ್ನೆಲೆಯಲ್ಲಿ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ದಾಖಲಿಸಲಾದ ಎಫ್‌ಐಆರ್ ರದ್ದುಗೊಳಿಸಬೇಕು ಎಂಬ ಕೋರಿಕೆಯನ್ನು ನಿರಾಕರಿಸಿದ ನ್ಯಾಯಾಲಯ ಎಸ್‌ಸಿ/ಎಸ್‌ಟಿ ಕಾಯಿದೆ ಜಾರಿಯಾಗದ ವಿನಾ ಜಾತಿ ತಾರತಮ್ಯ ಮುಕ್ತ ಸಮಾಜ ದೂರದ ಕನಸು ಎಂದು ಅಭಿಪ್ರಾಯಪಟ್ಟಿತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.