ದ್ವೇಷ ಭಾಷಣ: ಸಮಾಜವಾದಿ ಪಕ್ಷದ ಶಾಸಕ ಆಜಂ ಖಾನ್ ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ರಾಂಪುರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖಾನ್ ಅವರಿಗೆ ವಿಧಿಸಿದ್ದ ಮೂರು ವರ್ಷಗಳ ಜೈಲು ಸಜೆ ತೀರ್ಪನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಮಿತ್‌ವೀರ್‌ ಸಿಂಗ್ ರದ್ದುಗೊಳಿಸಿದರು.
Azam Khan
Azam Khan

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವಿರುದ್ಧ 2019 ರಲ್ಲಿ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಮತ್ತು ವಿಧಾನಸಭೆ ಸದಸ್ಯ ಆಜಂ ಖಾನ್ ಅವರನ್ನು ಉತ್ತರ ಪ್ರದೇಶದ ನ್ಯಾಯಾಲಯ ಬುಧವಾರ ದೋಷಮುಕ್ತಗೊಳಿಸಿದೆ.

ರಾಂಪುರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಖಾನ್‌ ಅವರಿಗೆ ವಿಧಿಸಿದ್ದ ಮೂರು ವರ್ಷಗಳ ಜೈಲು ಸಜೆ ತೀರ್ಪನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಮಿತ್‌ವೀರ್‌ ಸಿಂಗ್ ರದ್ದುಗೊಳಿಸಿದರು.

ವಿಶೇಷ ನ್ಯಾಯಾಲಯದ ತೀರ್ಪಿನಿಂದಾಗಿ ಖಾನ್ ಅವರು ರಾಜ್ಯ ವಿಧಾನಸಭೆ ಅಥವಾ ಸಂಸತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಲು ಅನರ್ಹರಾಗಿದ್ದರು.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಂದಿನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಏಪ್ರಿಲ್ 9, 2019 ರಂದು ರಾಂಪುರದಲ್ಲಿ ಖಾನ್ ವಿರುದ್ಧ ಜನ ಪ್ರತಿನಿಧಿ ಕಾಯಿದೆಯ ಸೆಕ್ಷನ್ 125ರೊಂದಿಗೆ  ಐಪಿಸಿ ಸೆಕ್ಷನ್ 153 ಎ ಮತ್ತು 505-1ರ ಅಡಿ ಪ್ರಕರಣ ದಾಖಲಿಸಲಾಗಿತ್ತು.

Kannada Bar & Bench
kannada.barandbench.com