ನಗರ ಸ್ಥಳೀಯ ಸಂಸ್ಥೆ ವಾರ್ಡ್ ವಾರು ಮೀಸಲಾತಿ ನಿಗದಿಗೆ ಮಾರ್ಗಸೂಚಿ ಪ್ರಕಟ: ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಯ ಅಂತಿಮ ಅಧಿಸೂಚನೆಯನ್ನು ತುರ್ತಾಗಿ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಕೋರಿದೆ.
High Court of Karnataka
High Court of Karnataka
Published on: 

ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವಾರ್ಡ್ ವಾರು ಮೀಸಲಾತಿ ನಿಗದಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಯ ಅಂತಿಮ ಅಧಿಸೂಚನೆಯನ್ನು ತುರ್ತಾಗಿ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೇರಿದಂತೆ ಇತರ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಕೆ ಎಸ್ ಭರತ್ ಕುಮಾರ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿ ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ವಾರ್ಡ್ ವಾರು ಮೀಸಲಾತಿ ನಿಗದಿಪಡಿಸಲು ಮಾರ್ಗಸೂಚಿಗಳನ್ನು ಪ್ರಕಟಿಸಿ 2026ರ ಸೆಪ್ಟಂಬರ್ 16ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.

ಇದನ್ನು ದಾಖಲಿಸಿಕೊಂಡ ಪೀಠವು ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿತು.

Kannada Bar & Bench
kannada.barandbench.com