ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಯತಿ ನರಸಿಂಗಾನಂದಗೆ ಹರಿದ್ವಾರ ಸೆಷನ್ಸ್ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಭರತ್ ಭೂಷಣ್ ಪಾಂಡೆ ಜಾಮೀನು ಅರ್ಜಿಯನ್ನು ಪುರಸ್ಕರಿಸಿದರು.
ದೇವಸ್ಥಾನದ ಆವರಣದೊಳಗೆ ಕುಳಿತು ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಆಧಾರದ ಮೇಲೆ ನರಸಿಂಗಾನಂದ ಅವರನ್ನು ಬಂಧಿಸಲಾಗಿತ್ತು.
ಐಪಿಸಿ ಸೆಕ್ಷನ್ 295ಎ (ಯಾವುದೇ ಸಮುದಾಯದ ಧಾರ್ಮಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶಪೂರ್ವಕ ಕೃತ್ಯ) ಸೆಕ್ಷನ್ 509ರ ಅಡಿ (ಮಹಿಳೆಯರ ಘನತೆಗೆ ಧಕ್ಕೆ ತರುವ ಪದ, ಸನ್ನೆ ಅಥವಾ ಕೃತ್ಯ ಎಸಗುವುದು) ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಆರಂಭದಲ್ಲಿ ಪ್ರಸ್ತುತ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನರಸಿಂಗಾನಂದ ಅವರನ್ನು ಬಂಧಿಸಲಾಯಿತು. ನಂತರ ಹರಿದ್ವಾರ ಧರ್ಮ ಸಂಸದ್‌ನಲ್ಲಿ ದ್ವೇಷಪೂರಿತ ಭಾಷಣಕ್ಕಾಗಿ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಲಾಯಿತು, ಆ ಪ್ರಕರಣದಲ್ಲಿ ಫೆಬ್ರವರಿ 7 ರಂದು ಜಾಮೀನು ನೀಡಲಾಗಿತ್ತು.