ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಜಯಕುಮಾರ್ ಪಾಟೀಲ್, ರಾಜೇಶ್ ರೈ ಕಲ್ಲಂಗಳ

ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಜಯಕುಮಾರ್ ಪಾಟೀಲ್, ರಾಜೇಶ್ ರೈ ಕಲ್ಲಂಗಳ
Published on

ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ವಿಜಯಕುಮಾರ್ ಪಾಟೀಲ್ ಹಾಗೂ ರಾಜೇಶ್ ರೈ ಕಲ್ಲಂಗಳ ಅವರಿಗೆ ಗುರುವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

Kannada Bar & Bench
kannada.barandbench.com