ಮುಖ್ಯ ಕಾರ್ಯದರ್ಶಿ ಅವಹೇಳನ: ಎಂಎಲ್‌ಸಿ ರವಿಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ವಿಶೇಷ ನ್ಯಾಯಾಲಯ

“ಅರ್ಜಿದಾರ ಆರೋಪಿಯು 10 ದಿನಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಮತ್ತು ಒಂದು ವೇಳೆ ಪೊಲೀಸರು ಅವರನ್ನು ಬಂಧಿಸಿದ್ದೇ ಆದರೆ ₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ ಪಡೆದು ಬಿಡುಗಡೆ ಮಾಡಬೇಕು” ಎಂದು ಆದೇಶಿಸಿದೆ.
BJP MLC N Ravikumar & Bengaluru city civil court
BJP MLC N Ravikumar & Bengaluru city civil court
Published on

ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಬಿಜೆಪಿ ಮುಖಂಡ ರವಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ವಿಚಾರಣೆ ನಡೆಸಿದರು.

“ಅರ್ಜಿದಾರ ಆರೋಪಿಯು 10 ದಿನಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಮತ್ತು ಒಂದು ವೇಳೆ ಪೊಲೀಸರು ಅವರನ್ನು ಬಂಧಿಸಿದ್ದೇ ಆದರೆ ₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ ಪಡೆದು ಬಿಡುಗಡೆ ಮಾಡಬೇಕು” ಎಂದು ಷರತ್ತು ವಿಧಿಸಿ ಅರ್ಜಿ ವಿಲೇವಾರಿ ಮಾಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ ವಾದಿಸಿದರು.

Also Read
ಮುಖ್ಯ ಕಾರ್ಯದರ್ಶಿ ಅವಹೇಳನ ಪ್ರಕರಣ: ರವಿಕುಮಾರ್‌ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್‌ ನಿರ್ದೇಶನ

ಪ್ರಕರಣದ ಹಿನ್ನೆಲೆ: ಬಿಜೆಪಿಯಿಂದ ಜುಲೈ 1ರಂದು ವಿಧಾನ ಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರವಿಕುಮಾರ್ ಅವರು ಶಾಲಿನಿ ರಜನೀಶ್‌ ಕುರಿತು ಅಸಂಸದೀಯ ಪದ ಬಳಸಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಾಗರತ್ನ ಅವರು ನೀಡಿದ ದೂರಿನ ಮೇರೆಗೆ ರವಿಕುಮಾರ್‌ ವಿರುದ್ಧ ವಿಧಾನ ಸೌಧ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ಗಳಾದ 351 (3), 75 (3) ಮತ್ತು 79 ಅಡಿ ಪ್ರಕರಣ ದಾಖಲಾಗಿದೆ.

Kannada Bar & Bench
kannada.barandbench.com