[ಚುಟುಕು] ಸಿಬಿಐ ತನಿಖೆಗೆ ಮನವಿ ಸಲ್ಲಿಕೆ; ಅಪರಾಧ ವಿಭಾಗವು ಪ್ರಕರಣ ತಿರುಚುತ್ತಿದೆ: ಹೈಕೋರ್ಟ್‌ಗೆ ನಟ ದಿಲೀಪ್ ವಿವರಣೆ

Dileep with Kerala HC

Dileep with Kerala HC

Published on: 

ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸ್‌ ಅಧಿಕಾರಿಗಳ ಕೊಲೆ ಯತ್ನ ಪ್ರಕರಣದಲ್ಲಿ ನಟ ದಿಲೀಪ್‌ಗೆ ನಿರೀಕ್ಷಣಾ ಜಾಮೀನು ಕೋರಿದ್ದ ಅವರ ಪರ ವಕೀಲರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಲಾಗುವುದು ಎಂದು ಕೇರಳ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಪೊಲೀಸ್‌ ಅಧಿಕಾರಿಯೊಬ್ಬರು ಪ್ರಕರಣವನ್ನು ತಿರುಚುತ್ತಿದ್ದಾರೆ ಎಂದು ವಕೀಲರು ಆಪಾದಿಸಿದ್ದಾರೆ. ತಮ್ಮ ವಿರುದ್ಧದ ಪ್ರಕರಣದ ತನಿಖೆ ನಡೆಸಿರುವ ಪೊಲೀಸ್‌ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಆರೋಪಿಸಿ ದಿಲೀಪ್‌ ಸೇರಿದಂತೆ ಐವರ ವಿರುದ್ಧ ಕೇರಳ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com