ಕರ್ನಾಟಕ ಹೈಕೋರ್ಟ್‌ಗೆ ಶನಿವಾರ, ಡಿ.20ರಿಂದ ಆರಂಭಿಸಿ ಡಿಸೆಂಬರ್ 31ರವರೆಗೆ ಚಳಿಗಾಲದ ರಜೆ ಇರಲಿದೆ. ಮಾರನೆಯ ದಿನ ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು, ಅಧಿಕೃತವಾಗಿ ಹೈಕೋರ್ಟ್ ಕಲಾಪವು ಜನವರಿ 5ರಿಂದ ಪುನಾರಂಭವಾಗಲಿದೆ. ಬರೋಬ್ಬರಿ ಎರಡು ವಾರ ನ್ಯಾಯಾಲಯಕ್ಕೆ ರಜೆ ಇರಲಿದೆ.
ಹೊಸ ವರ್ಷದ ಮೊದಲ ದಿನದ ಬಳಿಕ ಶುಕ್ರವಾರ (ಜ.2) ಘೋಷಿತ ರಜೆ ಇದ್ದು, ಶನಿವಾರ-ಭಾನುವಾರ ವಾರಾಂತ್ಯವಿರಲಿದೆ. ಜ.2ರ ರಜೆಯನ್ನು ನಿಗದಿತ ಶನಿವಾರದಂದು ಕಲಾಪ ನಡೆಸುವ ಮೂಲಕ ಹೊಂದಾಣಿಕೆ ಮಾಡಲಾಗುತ್ತದೆ ಎನ್ನಲಾಗಿದೆ.
ರಜಾಕಾಲದಲ್ಲೂ ಡಿಸೆಂಬರ್ 23, 26 ಮತ್ತು 30ರಂದು ತುರ್ತು ಪ್ರಕರಣಗಳ ವಿಚಾರಣೆಯನ್ನು ರಜಾಕಾಲೀನ ಪೀಠಗಳು ನಡೆಸಲಿವೆ.
ಡಿಸೆಂಬರ್ 23ರಂದು ಬೆಂಗಳೂರು ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್ ಸುನೀಲ್ ದತ್ ಯಾದವ್ ಮತ್ತು ಟಿ ಎಂ ನದಾಫ್ ಅವರ ವಿಭಾಗೀಯ ಪೀಠ, ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಹಾಗೂ ನ್ಯಾ. ವಿ ಶ್ರೀಶಾನಂದ ಅವರ ಏಕಸದಸ್ಯ ಪೀಠಗಳು ವಿಚಾರಣೆ ನಡೆಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ರವಿ ವಿ. ಹೊಸಮನಿ ಮತ್ತು ಕೆ ಬಿ ಗೀತಾ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಇನ್ನು ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಚ್ ಟಿ ನರೇಂದ್ರ ಪ್ರಸಾದ್ ಮತ್ತು ಹಂಚಾಟೆ ಸಂಜೀವ್ ಕುಮಾರ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.
ಡಿಸೆಂಬರ್ 26ರಂದು ಬೆಂಗಳೂರು ಪೀಠದಲ್ಲಿ ನ್ಯಾಯಮೂರ್ತಿಗಳಾದ ಬಿ ಎಂ ಶ್ಯಾಮ್ ಪ್ರಸಾದ್ ಮತ್ತು ಟಿ ವೆಂಕಟೇಶ್ ನಾಯಕ್ ಅವರ ವಿಭಾಗೀಯ ಪೀಠ, ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಹಾಗೂ ನ್ಯಾ. ಜಿ ಬಸವರಾಜ ಅವರ ಏಕಸದಸ್ಯ ಪೀಠಗಳು ವಿಚಾರಣೆ ನಡೆಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೆ ಎಸ್ ಹೇಮಲೇಖಾ ಮತ್ತು ಬಿ ಮುರಳೀಧರ್ ಪೈ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಇನ್ನು ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಅಶೋಕ್ ಎಸ್. ಕಿಣಗಿ ಮತ್ತು ಎಸ್ ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.
ಡಿಸೆಂಬರ್ 30ರಂದು ಬೆಂಗಳೂರು ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಚಿನ್ ಶಂಕರ್ ಮಗದುಮ್ ಮತ್ತು ಡಾ. ಮನ್ಮಧ ರಾವ್ ಅವರ ವಿಭಾಗೀಯ ಪೀಠ, ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಹಾಗೂ ನ್ಯಾ. ಕೆ ವಿ ಅರವಿಂದ್ ಅವರ ಏಕಸದಸ್ಯ ಪೀಠಗಳು ವಿಚಾರಣೆ ನಡೆಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಆರ್ ನಟರಾಜ್ ಮತ್ತು ವಿಜಯಕುಮಾರ್ ಎ. ಪಾಟೀಲ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಇನ್ನು ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇ ಎಸ್ ಇಂದಿರೇಶ್ ಮತ್ತು ತ್ಯಾಗರಾಜ್ ಎನ್. ಇನವಲ್ಲಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ. ಆನಂತರ ಇದೇ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.
ತುರ್ತು ಆದೇಶಗಳು, ತಡೆ ಆದೇಶಗಳು ಮತ್ತು ಮಧ್ಯಂತರ ನಿರ್ದೇಶನ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ರಜಾಕಾಲೀನ ಪೀಠಗಳು ನಡೆಸಲಿವೆ ಎಂದು ನ್ಯಾಯಾಂಗ ರಿಜಿಸ್ಟ್ರಾರ್ ಸರಸ್ವತಿ ವಿಷ್ಣು ಕೊಸಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.