ಶಓಮಿ ಖಾತೆ ಜಪ್ತಿ ಪ್ರಕರಣ: ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ; ಕೇಂದ್ರಕ್ಕೆ ನೋಟಿಸ್‌

ಕೇಂದ್ರ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯಕ್ಕೆ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದೆ. ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಲಾಗಿದೆ.
Karnataka High Court, Xiaomi
Karnataka High Court, Xiaomi

ಚೀನಾದ ಶಓಮಿ ತಂತ್ರಜ್ಞಾನ ಸಂಸ್ಥೆಗೆ ಸೇರಿದ 5551.27 ಕೋಟಿ ರೂಪಾಯಿ ಜಫ್ತಿ ಮಾಡಿದ್ದ ಆದೇಶವನ್ನು ಎತ್ತಿ ಹಿಡಿದಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಿಲಾಗಿದ್ದು, ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಬುಧವಾರ ನೋಟಿಸ್‌ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯದ ಆದೇಶವನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (ಫೆಮಾ) 1999ರ ಅಡಿ ರಚಿಸಿರುವ ಸಕ್ಷಮ ಪ್ರಾಧಿಕಾರವು ಕಾಯಂಗೊಳಿಸಿತ್ತು. ಇದನ್ನು ಏಕಸದಸ್ಯ ಪೀಠವು ಪುರಸ್ಕರಿಸಿತ್ತು.

ಶಓಮಿ ಟೆಕ್ನಾಲಜಿ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್‌ ಕಮಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಕೇಂದ್ರ ಸರ್ಕಾರ ಮತ್ತು ಜಾರಿ ನಿರ್ದೇಶನಾಲಯಕ್ಕೆ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದೆ. ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಲಾಗಿದೆ.

Also Read
ಖಾತೆ ಜಪ್ತಿ ಮಾಡಿದ್ದ ಸಕ್ಷಮ ಪ್ರಾಧಿಕಾರದ ನಿರ್ಧಾರ ಪ್ರಶ್ನಿಸಿದ್ದ ಶಓಮಿ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಫೆಮಾ ಕಾಯಿದೆಯ ಸೆಕ್ಷನ್‌ 37ಎ ಸಾಂವಿಧಾನಿಕ ಸಿಂಧುತ್ವವನ್ನು ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಇದನ್ನು ಮೇಲ್ಮನವಿಯಲ್ಲಿ ಪ್ರಶ್ನಿಸಲಾಗಿದೆ.

2022ರ ಸೆಪ್ಟೆಂಬರ್‌ 19ರಂದು ಸಕ್ಷಮ ಪ್ರಾಧಿಕಾರವು ಜಾರಿ ನಿರ್ದೇಶನಾಲಯದ ಜಪ್ತಿ ಆದೇಶವನ್ನು ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಶಓಮಿಯು ಹೈಕೋರ್ಟ್‌ ಮೆಟ್ಟಿಲೇರಿದ್ದು, ಏಕಸದಸ್ಯ ಪೀಠವು ಸಕ್ಷಮ ಪ್ರಾಧಿಕಾರದ ಆದೇಶ ಕಾಯಂಗೊಳಿಸಿತ್ತು. ಈಗ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಾಗಿದೆ.

Related Stories

No stories found.
Kannada Bar & Bench
kannada.barandbench.com