ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ: ಒಂದು ತಿಂಗಳು ವಿಚಾರಣೆ ಮುಂದೂಡಿದ ಹೈಕೋರ್ಟ್‌

“ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ನ್ಯಾಯಾಲಯದ ಆದೇಶ ಪಾಲಿಸಲು ಆರು ವಾರ ಕಾಲಾವಕಾಶ ನೀಡಬೇಕು” ಎಂದು ಕೋರಿದ ಎಜಿ.
Karnataka HC and election
Karnataka HC and election
Published on

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯತಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ವಿಚಾರವಾಗಿ ನ್ಯಾಯಾಲಯದ ನಿರ್ದೇಶನ ಪಾಲಿಸಲು ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿದೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್‌ ಕಮಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

Also Read
ಜಿಪಂ-ತಾಪಂ ಚುನಾವಣೆ: ಮಾಸಾಂತ್ಯದಲ್ಲಿ ಒಬಿಸಿ ಮೀಸಲಾತಿ ಅಧಿಸೂಚನೆ ಪ್ರಕಟ; ಹೈಕೋರ್ಟ್‌ಗೆ ಸರ್ಕಾರದ ವಿವರಣೆ

ಪ್ರಕರಣದ ವಿಚಾರಣೆಯಲ್ಲಿ ಪಾಲ್ಗೊಂಡಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ನ್ಯಾಯಾಲಯದ ಆದೇಶ ಪಾಲಿಸಲು ಆರು ವಾರ ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದರು. ಇದಕ್ಕೆ ಒಪ್ಪದ ಪೀಠವು ನಾಲ್ಕು ವಾರಗಳ ಕಾಲಾವಕಾಶ ನೀಡಿ, ವಿಚಾರಣೆಯನ್ನು ಜೂನ್‌ 29ಕ್ಕೆ ಮುಂದೂಡಿತು.

Kannada Bar & Bench
kannada.barandbench.com