ಸೂರಜ್ ತನ್ನ ಮೇಲೂ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಚೇತನ್ ವಿರುದ್ಧ ದೂರು ಕೊಡಿಸಲು ಸಚಿನ್, ರಕ್ಷಿತ್ ಮೂಲಕ ತನ್ನ ಮೇಲೆ ಒತ್ತಡ ಹೇರಿದ್ದರು ಎಂದು ದೂರಲಾಗಿತ್ತು.
ಚೇತನ್ ಎಂಬಾತ ನೀಡಿದ್ದ ದೂರಿನಲ್ಲಿ ನಿಯತ ಮತ್ತು ಶಿವಕುಮಾರ್ ಎಂಬಾತ ನೀಡಿದ್ದ ದೂರಿನಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಸೂರಜ್ ಅರ್ಜಿಗಳನ್ನು ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಪುರಸ್ಕರಿಸಿದ್ದಾರೆ.
ಎಂ ಎಲ್ ಶಿವಕುಮಾರ್ ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸೂರಜ್ ಸಲ್ಲಿಸಿರುವ ಅರ್ಜಿಯ ಆದೇಶವನ್ನು ಜುಲೈ 22ರಂದು ಪ್ರಕಟಿಸುವುದಾಗಿ ನ್ಯಾಯಾಲಯ ಮುಂದೂಡಿದೆ.
ಸ್ವಪಕ್ಷದ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಬಂಧನಕ್ಕೆ ಒಳಗಾಗಿರುವ ಸೂರಜ್ ಸಲ್ಲಿಸಿರುವ ನಿಯತ ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ವಿಚಾರಣೆ ನಡೆಸಿದರು.
ಶಾಸಕ ಎಚ್ ಡಿ ರೇವಣ್ಣರ ಹಿರಿಯ ಪುತ್ರನಾದ ಸೂರಜ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಜುಲೈ 4ರಂದು ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ಇಂದು ಪ್ರಕಟಿಸಿದ ನ್ಯಾಯಾಲಯ.
ಜೆಡಿಎಸ್‌ನ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ಕೆ ಎನ್ ಶಿವಕುಮಾರ್ ಅವರು ಸುದೀರ್ಘವಾಗಿ ನಡೆಸಿ, ಆದೇಶ ಕಾಯ್ದಿರಿಸಿದರು.
ಈ ನಡುವೆ, ಸೂರಜ್ ಪರ ವಕೀಲ ನಿಖಿಲ್ ಕಾಮತ್ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದರು. ಆಗ ಸಿಐಡಿ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್ ನಾಯಕ್ ಅವರು ಗುರುವಾರ (ಜುಲೈ 4) ಆಕ್ಷೇಪಣೆ ಸಲ್ಲಿಸುವುದಾಗಿ ತಿಳಿಸಿದರು.